ಜಯರತ್ನ ಚಾರಿಟೇಬಲ್ ಟ್ರಸ್ಟ್ (ರಿ.) ಅಧ್ಯಕ್ಷ ಹಾಗೂ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ ನಮ್ಮ ಹೆಮ್ಮೆಯ ತಾಯ್ನುಡಿಯಾದ ಕುಂದಾಪ್ರ ಕನ್ನಡವನ್ನು ಉಳಿಸಿ ಬೆಳೆಸಬೇಕಾದರೆ, ಮೊದಲು ನಾವು ನಮ್ಮ ಮನೆಗಳಲ್ಲಿ ಮಕ್ಕಳೊಂದಿಗೆ ಅದೇ ಭಾಷೆಯಲ್ಲಿ ಮಾತನಾಡಬೇಕು. ಇಂದಿನ ಮಕ್ಕಳು ಇಂಗ್ಲಿಷ್ ಮಾಧ್ಯಮಕ್ಕೆ ಒಗ್ಗಿಹೋಗಿ ತಾಯ್ನುಡಿಯಿಂದ ದೂರವಾಗುತ್ತಿದ್ದು, ಇದನ್ನು ತಡೆಯಲು ಮನೆಗಳಿಂದಲೇ ಭಾಷಾ ಪ್ರೇಮ ಆರಂಭವಾಗಬೇಕು ಎಂದು ಕರೆ ನೀಡಿದರು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ (ರಿ.) ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು.
ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಕನ್ನಡ ಹೋರಾಟಗಾರ್ತಿ ಅಶ್ವಿನಿ ಗೌಡ, ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ರಾಜು ಮೊಗವೀರ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಂಯೋಜಕ ಪ್ರೊ. ನಾಗಪ್ಪಗೌಡ ಆರ್. ಇವರನ್ನು ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು.

​ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಅರುಣ್ ಕುಮಾರ್ ಹೆಗ್ಡೆ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಚಿಟ್ಟೆಬೈಲು ಜಗನ್ನಾಥ ಶೆಟ್ಟಿ, ಕುಂದಾಪ್ರ ಕನ್ನಡ ಪೀಠದ ಸದಸ್ಯರಾದ ಕೆ.ಸಿ. ರಾಜೇಶ್, ಪಡುಕೆರೆ ಉದಯಕುಮಾರ್ ಶೆಟ್ಟಿ, ಜುಡಿತ್ ಮೆಂಡೋನ್ಸಾ ಹಾಗೂ ಡಾ. ರೇಖಾ ಬನ್ನಾಡಿ ಉಪಸ್ಥಿತರಿದ್ದರು.

​ಶಿಕ್ಷಕ ಪ್ರಕಾಶ್ ಆಚಾರ್ಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿೂಪಿಸಿದರು. ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಕೊನೆಯಲ್ಲಿ ವಂದನಾರ್ಪಣೆ ಮಾಡಿದರು. ನೂರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದ ಈ ಕಲಾ ಹಬ್ಬವು ತಾಯ್ನುಡಿಯ ಜಾಗೃತಿ ಮೂಡಿಸುವಲ್ಲಿ ಸಂಪೂರ್ಣ ಯಶಸ್ವಿಯಾಯಿತು.

Leave a Reply

Your email address will not be published. Required fields are marked *